ಬೆಂಗಳೂರು,ಅಕ್ಟೋಬರ್,14,2023(www.justkannada.in): ಶೀಘ್ರದಲ್ಲೇ ಗುತ್ತಿಗೆದಾರರ ಬಾಕಿ ಹಣವನ್ನ ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ತಿಳಿಸಿದ್ದಾರೆ.
ಇಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಬಾಕಿ ಬಿಲ್ ಬಿಲ್ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕೆಂಪಣ್ಣ ಅವರು, ಐದುವರೆ ತಿಂಗಳಿಂದ ಬಾಕಿ ಇರುವ ಬಿಲ್ ಬಿಡುಗಡೆ ಮಾಡಿಲ್ಲ. ಇದರಿಂದ ನಮಗೆ ಸಾಕಷ್ಟು ತೊಂದರೆಯಾಗಿದೆ. ಆದಷ್ಟು ಬೇಗ ಬಗೆಹರಿಸುತ್ತೇವೆ ಅಂತ ಹೇಳಿದ್ದಾರೆ. ತಕ್ಷಣ ಹಣ ಬಿಡುಗಡೆ ಮಾಡುತ್ತೇವೆ ಅಂತ ಹೇಳಿದ್ದಾರೆ. ಆದರೆ ಎಷ್ಟು ಅಂತ ಹೇಳಿಲ್ಲ ಎಂದರು.
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮಾಡಿರುವ ಆರೋಪದ ಬಗ್ಗೆ ನಮಗೆ ಮಾಹಿತಿ ಇಲ್ಲ. ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೂ ನಮಗೂ ಸಂಬಂಧ ಇಲ್ಲ. ಹೋರಾಟ ವಾಪಸ್ ತಗೊಳ್ಳುವುದಿಲ್ಲ. ಹಣ ಬಿಡುಗಡೆ ಆಗುವ ತನಕ ಹೋರಟ ಮಾಡುತ್ತೇವೆ. 22 ಸಾವಿರ ಕೋಟಿ ರೂ. ಹಣ ಬಿಡುಗಡೆ ಆಗಬೇಕಿದೆ ಎಂದರು.
Key words: CM Siddaramaiah -promises – release – -contractors-bill-Kempanna