ಬೆಂಗಳೂರು,ಜುಲೈ,20,2024 (www.justkannada.in): ಭಾರಿ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದು ಘಟನಾ ಸ್ಥಳಕ್ಕೆ ನಾಳೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.
ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ನಾಳೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗ್ರಾಮಕ್ಕೆ ಭೇಟಿ ನೀಡುತ್ತೇನೆ. ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಸಂಭವಿಸಿ ಅನಾಹುತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತರಿಗೆ ಸಾಂತ್ವನ ಹೇಳುವುದಾಗಿ ತಿಳಿಸಿದರು.
ಇನ್ನು ಘಟನಾ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿಯವರೂ ಭೇಟಿ ಕೊಟ್ಟರೇ ಕೊಡಲಿ ಬಿಡಿ, ನಮ್ಮ ಸಚಿವರು, ಅಧಿಕಾರಿಗಳು ಕೂಡ ಭೇಟಿ ನೀಡಿದ್ದಾರೆ ಎಂದರು.
Key words: CM Siddaramaiah, visit Shiruru, hill collapse, tomorrow