ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ-ಎಸ್ಪಿಗಳನ್ನೇ ಹೊಣೆ ಮಾಡಿ ಕ್ರಮ-ಸಿಎಂ ಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ

ಬೆಂಗಳೂರು ಸೆಪ್ಟಂಬರ್,15,2023(www.justkannada.in): ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ನಮ್ಮ ಸರ್ಕಾರ ಕೇವಲ ‌ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಕೈ ತೊಳೆದುಕೊಳ್ಳುವುದಿಲ್ಲ, ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್ ಐ ಆರ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರು ಕೊಡುವವರು ಬರಲಿ ಎಂದು ಕಾಯುತ್ತಾ ಕೂರಬಾರದು ಎನ್ನುವ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.

ಸಿಸಿಬಿಯನ್ನು  ಇನ್ನಷ್ಟು ಸದೃಢಗೊಳಿಸಲು 230 ಸಿಬ್ಬಂದಿಯನ್ನು ಹೊಸದಾಗಿ ನೇಮಿಸಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಸಿಬ್ಬಂದಿಗೆ ಅಗತ್ಯವಾದರೆ ಹೊಸ ಕಟ್ಟಡಗಳನ್ನು ಒದಗಿಸಲಾಗುವುದು ಎಂದರು.

ಹಿರಿಯ ಅಧಿಕಾರಿಗಳು ಜನ ಸಂಪರ್ಕಕ್ಕೆ ಸಿಗದೇ ಹೋದರೆ , ಜನ ಸ್ನೇಹಿ ಆಗದೇ ಹೋದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.  ಅನೈತಿಕ ಪೊಲೀಸ್ ಗಿರಿ ವಿಚಾರದಲ್ಲಿ ಸರ್ಕಾರ zero tolarence ವಹಿಸಲಿದೆ ಎಂದು ಸ್ಪಷ್ಟ ಮಾತುಗಳಲ್ಲಿ ಎಚ್ಚರಿಸಿದರು.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಪೊಲೀಸ್ ಅಧಿಕಾರಿಗಳಿಗೆ ನೀಡಿದ ಸೂಚನೆಗಳ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಠಾಣಾಧಿಕಾರಿಗಳ ಗಮನಕ್ಕೆ ಬರದಂತೆ ಯಾವ ಅಪರಾಧಗಳೂ, ಕರಾಳ ದಂಧೆಗಳೂ ನಡೆಯಲು ಸಾಧ್ಯವಿಲ್ಲ. ಹಿರಿಯ ಅಧಿಕಾರಿಗಳು ಠಾಣೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವುದು ಕಡ್ಡಾಯ. ಪೊಲೀಸರು ದರ್ಪ ಬಿಟ್ಟು ಜನಸ್ನೇಹಿಯಾಗಿ ಕೆಲಸ ಮಾಡಬೇಕು. ಠಾಣೆಗೆ ಬರುವ ಬಡವರು, ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಬಗ್ಗೆ ಭರವಸೆ ಹುಟ್ಟುವ ರೀತಿಯಲ್ಲಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಿ ಎಂದು ಸಿಎಂ ಸಿದ‍್ಧರಾಮಯ್ಯ ತಿಳಿಸಿದರು.

ಗೃಹ ಸಚಿವರಾದ ಜಿ.ಪರಮೇಶ್ವರ್, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತರಾದ ದಯಾನಂದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಗೋಷ್ಠಿಯಲ್ಲಿದ್ದರು.

Key words: CM –Siddaramaiah- warning – DCP-SPs

ENGLISH SUMMARY..

Law and order is directly related to the development of the state. Give priority to protection – Chief Minister Siddaramaiah

We will hold DCP-SPs responsible and take action: CM warns

Bengaluru Sep 15: Chief Minister Siddaramaiah said that the government will take action on DCP and SP level officials who will be held responsible for unlawful activities and illegally organized crimes taking place in the limits of their respective police stations.

He warned that our government will not wash its hands by just taking action against the lower level officials , action will also be taken against the senior officials.

Action should be taken by registering a voluntary FIR against those who disturb the peace of the society through false news and rumours. He said that a instruction has been given not to wait for complainants to come in sensitive cases.

230 new personnel have been approved to strengthen the CCB. New buildings will be provided to the staff if necessary, he said.

Action will be taken against senior officers who do not get in touch with the people and friendly to the people , the CM said

He warned in clear words that the government will have zero tolerance on the issue of immoral policing.

Instructions given to the police officers at the annual conference of senior police officers held at the office of the State Director General of Police was explained in the press conference.

Home Minister G. Parameshwar, Additional Chief Secretary to Government Rajneesh Goel, State Director General of Police Alok Mohan, City Police Commissioner Dayanand, Chief Minister’s Political Secretary Govindaraju were present.

Highlights of the Press meet

No crimes or illegal dealings can happen without the attention of the station officials

It is mandatory for senior officers to visit the stations and carry out inspection

Police should leave ego and should be people friendlyPeople-friendly police system should be created where poor and common people can come to the police station with confidence on the police system