ಮೈಸೂರು, ಅಕ್ಟೋಬರ್ 1,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಎಫ್ ಐಆರ್ ದಾಖಲಾಗಿದ್ದು ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಪತ್ನಿ ತಮಗೆ ನೀಡಿದ್ದ 14 ಸೈಟ್ ಗಳನ್ನ ವಾಪಸ್ ಮುಡಾಗೆ ನೀಡಿದ್ದು, 14 ಸೈಟ್ ಗಳ ಖಾತೆ ರದ್ದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಖುದ್ದು ಸಿಎಂ ಪತ್ನಿ ಪಾರ್ವತಿ ಅವರೇ ಇಂದು ಮೈಸೂರಿನ ಉಪನೋಂದಣಿ ಕಚೇರಿಗೆ ತೆರಳಿ ತಮಗೆ ಮಂಜೂರಾಗಿದ್ದ ಒಟ್ಟು 14 ಮುಡಾ ನಿವೇಶನಗಳ ಖಾತೆ ರದ್ದು ಮಾಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮುಡಾ ಆಯುಕ್ತ ರಘುನಂದನ್, 14 ಸೈಟ್ಗಳು ಮುಡಾಗೆ ವಾಪಸ್ ಆಗಿದ್ದು, ಈಗ 14 ಸೈಟ್ಗಳ ಕ್ರಯಪತ್ರ ರದ್ದಾಗಿದೆ. ಅವರು ಸ್ವಇಚ್ಛೆಯಿಂದ ಬಂದು ಕೊಟ್ಟಿದ್ದಕ್ಕೆ ನಾವು ಸ್ವೀಕರಿಸಿದ್ದೇವೆ. ಇದನ್ನ ಸರ್ಕಾರದ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದ್ದಾರೆ.
14 ಸೈಟ್ ಗಳನ್ನು ವಾಪಸ್ ಪಡೆಯುವಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾಗೆ ಪತ್ರ ಬರೆದ ಮರುದಿನವೇ ಮುಡಾ 14 ನಿವೇಶನಗಳ ಖಾತೆಯನ್ನು ರದ್ದುಗೊಳಿಸಿದ್ದಾರೆ.
Key words: CM siddaramaiah wife, 14 sites, cancelled, Muda