ಬೆಂಗಳೂರು,ಜನವರಿ,1,2025 (www.justkannada.in): ಇಂದು ಹೊಸ ವರ್ಷದ ಸಂಭ್ರಮವಾಗಿದ್ದು ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.
ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರೀತಿಯ ನಾಡಬಾಂಧವರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು.
ಹೊಸ ವರ್ಷವನ್ನು ಹೊಸ ಚಿಂತನೆ, ಹೊಸ ಭರವಸೆ ಹಾಗೂ ಹೊಸ ಉತ್ಸಾಹದೊಂದಿಗೆ ಬರಮಾಡಿಕೊಳ್ಳೋಣ. ಜಾತಿ, ಧರ್ಮಗಳ ದ್ವೇಷ ತೊರೆದು ಎಲ್ಲರೂ ಒಂದಾಗಿ ಪ್ರೀತಿ – ಸಹಬಾಳ್ವೆಯ ಹಾದಿಯಲ್ಲಿ ಹೆಜ್ಜೆಹಾಕೋಣ. 2025ರ ನವ ವಸಂತ ತಮ್ಮೆಲ್ಲರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
Key words: CM Siddaramaiah, wishes ,New Year