ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್: ರಿಟ್ ಅರ್ಜಿ ವಿಚಾರಣೆ ಆ.29ಕ್ಕೆ ಮುಂದೂಡಿಕೆಕೆ

ಬೆಂಗಳೂರು,ಆಗಸ್ಟ್,19,2024 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನ  ಹೈಕೋರ್ಟ್ ಆಗಸ್ಟ್ 29ಕ್ಕೆ ಮುಂದೂಡಿಕೆ ಮಾಡಿ ಮಧ್ಯಂತರ ಆದೇಶ ನೀಡಿದೆ.

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ಸಿಎಂ ಸಿದ್ದರಾಮಯ್ಯ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿಂಘ್ವಿ , ವಿವೇಚನಾರಹಿತರಾಗಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಪ್ರಕರಣದ ವಿಚಾರಣೆಯನ್ನ ಆಗಸ್ಟ್ 29 ಕ್ಕೆ ಮುಂದೂಡುವಂತೆ ಮನವಿ ಮಾಡಿದರು.  ವಕೀಲ ಸಿಂಘ್ವಿ. ಮನವಿಗೆ  ಹೈಕೋರ್ಟ್ ಅಸ್ತು ಎಂದಿದ್ದು, 10 ದಿನಗಳ ಕಾಲ ವಿಚಾರಣೆಯನ್ನ ಮುಂದೂಡಿ ಆದೇಶ ಹೊರಡಿಸಿದೆ.

ಅಲ್ಲದೆ ಜನಪ್ರತಿನಿಧಿಗಳ ಕೋರ್ಟ್ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್, ವಿಚಾರಣೆಯನ್ನ ಆಗಸ್ಟ್ 29ಕ್ಕೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್ ಗೆ ಸೂಚಿಸಿತು. ಅಲ್ಲದೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದವರೆಗೂ ಯಾವುದೇ ಕೋರ್ಟ್ ತೀರ್ಪು ನೀಡದಂತೆ ಸೂಚಿಸಿದೆ. ಟಿಜೆ ಅಬ್ರಾಹಂ, ಸ್ನೇಹಮಯಿ ಕೃಷ್ಣ ದೂರು ವಿಚಾರಣೆ ಮುಂದೂಡುವಂತೆ ಸೂಚನೆ ನೀಡಿದ್ದು ಸಿಎಂ ವಿರುದ್ದ ಯಾವುದೇ ತನಿಖೆ ವಿಚಾರಣೆ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

Key words: CM Siddaramaiah, Writ petition, adjourned, high court