ಬೆಂಗಳೂರು, ಮೇ 30,2021 (www.justkannada.in): ಲಾಕ್ಡೌನ್ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತಗೊಂಡಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಪೌರ ಕಾರ್ಮಿಕರಿಗೆ ಪುಡ್ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಾತನಾಡಿದ ಅವರು, ಲಾಕ್ಡೌನ್ ವಿಸ್ತರಣೆ ಮಾಡಿ ಅಂತಾ ತಜ್ಞರು ಸದ್ಯ ಯಾವುದೇ ವರದಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜೂನ್ 5 ಮತ್ತು 6ರ ವೇಳೆಗೆ ಪರಿಸ್ಥಿತಿ ಹೇಗಿದೆ ಎಂದು ನೋಡಿಕೊಂಡು, ತಜ್ಞರು ಹಾಗೂ ಸಚಿವರ ಜೊತೆ ಸಭೆ ನಡೆಸಿ ಲಾಕ್ಡೌನ್ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಎರಡನೇ ಹಂತದ ಪ್ಯಾಕೇಜ್ ಘೋಷಣೆ ವಿಚಾರವಾಗಿ ಸಿದ್ಧತೆ ನಡೆಯುತ್ತಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.