ಬೆಂಗಳೂರು, ನವೆಂಬರ್ 22, 2020 (www.justkannada.in): ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದಿಢೀರನೆ ನವದೆಹಲಿಗೆ ತೆರಳಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಕಳೆದ ರಾತ್ರಿ ಏಕಾಏಕಿ ನವದೆಹಲಿಗೆ ತೆರಳಿರುವ ವಿಜಯೇಂದ್ರ ಇಂದು ಪಕ್ಷದ ಕೆಲವು ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.
ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎ.ಪಿ.ನಡ್ಡಾ , ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಮತ್ತಿತರ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.