ಬೆಂಗಳೂರು,ಆಗಸ್ಟ್,16,2023(www.justkannada.in): ಕೆಲ ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಮರಳುತ್ತಾರೆಂಬ ವಿಚಾರ ಚರ್ಚೆಯಾಗುತ್ತಿದ್ದು ಈ ಸಂಬಂಧ ಪ್ರತಿಕ್ರಿಯಿಸಿರುವ ಸಂಸದ ಡಿ.ಕೆ ಸುರೇಶ್ , ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಸಂಸದ ಡಿ.ಕೆ ಸುರೇಶ್, ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುತ್ತದೆ. ಲೋಕಸಭಾ ಚುನಾವಣೆ ಬಗ್ಗೆ ದೆಹಲಿಯಲ್ಲಿ ಸಭೆ ನಡೆದಿದೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂದು ಚರ್ಚೆ ಆಗಿದೆ. ಅಭ್ಯರ್ಥಿ ಆಯ್ಕೆಗೆ ಮಾನದಂಡಗಳೇನು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.
Key words: comes – Congress -party – welcome – MP DK Suresh.