ಬೆಂಗಳೂರು,ಫೆ,28,2020(www.justkannada.in): ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆ, ಕಳಸಾ ಬಂಡೂರಿ ಕಾಮಗಾರಿ ಶೀಘ್ರವೇ ಪ್ರಾರಂಭ ಮಾಡಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಅಧಿಸೂಚನೆ ಹೊರಡಿಸಿದ್ದಕ್ಕೆ ಪ್ರಧಾನಿ ಮೋದಿ ಸರ್ಕಾರ ಹಾಗೂ ನಮ್ಮ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭ ಮಾಡಲಾಗುತ್ತದೆ. ಸುಪ್ರೀಂಕೋರ್ಟ್ ಆದೇಶಕ್ಕೂ ಮುನ್ನವೇ ಕಾಮಗಾರಿಗೆ 200 ಕೋಟಿ ಮೀಸಲಿಡುವಂತೆ ಸಿಎಂ ಬಿಎಸ್ ವೈಗೆ ಮನವಿ ಮಾಡಿದ್ದೇನೆ. ಇನ್ನು ಈ ಸಂದರ್ಭದಲ್ಲಿ ವಿಜಯೋತ್ಸವ ಆಚರಿಸುವುದು ಬೇಡ ಎಂದರು.
ಮಹದಾಯಿ ಮಹದಾಯಿ ಹೋರಾಟಗಾರರ ಮೇಲೆ ಕೇಸ್ ವಾಪಸ್ ಕುರಿತು ಪ್ರತಿಕ್ರಿಯಿಸಿದ ಸಚಿವ ರಮೇಶ್ ಜಾರಕಿಹೊಳಿ, ಈ ಬಗ್ಗೆ ಶೀಘ್ರವೇ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
Key words: Commencement – Kalasa Banduri –works- Water Resources Minister- Ramesh jarakiholi