ಬೆಂಗಳೂರು,ಅಕ್ಟೋಬರ್,14,2023(www.justkannada.in): ಬೆಂಗಳೂರಿನಲ್ಲಿ ಗುತ್ತಿಗೆದಾರ ಅಂಬಿಕಾಪತಿ ಮನೆ ಮೇಲೆ ಐಟಿ ವೇಳೆ 40 ಕೋಟಿ ರೂಪಾಯಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ನಡೆಯುತ್ತಿರುವ ಕಮಿಷನ್ ಲಾಬಿಗಳು ಬಹಿರಂಗವಾಗಿವೆ. ಗುತ್ತಿಗೆದಾರರು ಬಿಲ್ ಗಾಗಿ ರಾಜ್ಯಪಾಲರಿಗೆ ದೂರು ನೀಡಿದ್ದರು. ಆಗ ಬಿಲ್ ಹಣ ಕೊಡದೇ ಕಮಿಷನ್ ಕುದುರಿಸುವ ಕೆಲಸ ಆಗುತ್ತಿತ್ತು. ಗುತ್ತಿಗೆದಾರರ ಸಂಘದ ಉಪಾಧ್ಯಕ್ಷನ ಮನೆಯಲ್ಲಿ ಅಪಾರ ಹಣ ಸಿಕ್ಕಿದೆ. ಈವರೆಗೂ ಗುತ್ತಿಗೆದಾರರ ಮನೆಯಲ್ಲಿ ಇಷ್ಟು ದೊಡ್ಡ ಹಣ ಸಿಕ್ಕಿರಲಿಲ್ಲ ಎಂದು ಕಿಡಿಕಾರಿದರು.
Key words: Commission-lobbies – state – Former CM –Basavaraj Bommai