ಬೆಳಗಾವಿ, ಮಾರ್ಚ್,5,2025 (www.justkannada.in): ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ರಾಯಭಾಗ ತಾಲೂಕಿನ ಚಿಂಚಲಿ ಬಳಿ ಈ ಘಟನೆ ನಡೆದಿದೆ. ತಾಯಿ ಶಾರದಾ (32), ಮಕ್ಕಳಾದ ಅಮೃತಾ, ಆದರ್ಶ ಹಾಗೂ ಅನುಷ್ಕಾ ಮೃತಪಟ್ಟವರು. ಪತಿ ಅಶೋಕ್ ಕಿರುಕುಳದಿಂದ ಬೇಸತ್ತು ಶಾರದಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಶಾರದಾ ತನ್ನ ಮಕ್ಕಳೊಂದಿಗೆ ನದಿಗೆ ಹಾರಿದ್ದನ್ನು ನೋಡಿದ ಸ್ಥಳೀಯರು ನೀರಿನಲ್ಲಿ ಮುಳುಗುತ್ತಿದ್ದ ಅನುಕ್ಷಾಳನ್ನು ರಕ್ಷಣೆ ಮಾಡಿದ್ದರು. ನಂತರ ಆಕೆಯನ್ನು ರಾಯಬಾಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೂ ಚಿಕಿತ್ಸೆಗೆ ಸ್ಪಂದಿಸದೆ ಆಕೆಯೂ ಮೃತಪಟ್ಟಿದ್ದಾಳೆ.
ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ಅಶೋಕ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Key words: Mother, commits suicide, jumping, river, three children