ಬೆಂಗಳೂರು, ಆಗಸ್ಟ್ 25, 2019 (www.justkannada.in): ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಇದೀಗ ಪೈಪೋಟಿ ಶುರುವಾಗಿದೆ.
ಕೆಪಿಸಿಸಿ ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಅವರನ್ನು ಬದಲಾಯಿಸುವಂತೆ ಸಿದ್ದರಾಮಯ್ಯ ವಿರೋಧಿಗಳು ಪಟ್ಟು ಹಿಡಿದಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಆ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಡಿ.ಕೆ. ಶಿವಕುಮಾರ್ ಅವರು ತಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಮಾಡಿದ್ದು, ಸೋನಿಯಾ ಗಾಂಧಿ ಅವರನ್ನು ಬೇಟಿಯಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ವಿಪಕ್ಷ ನಾಯಕ ಸ್ಥಾನದ ಗೊಂದಲ ಮುಂದುವರೆದಿದ್ದು, ಕಾಂಗ್ರೆಸ್ ಹೈಕಮಾಂಡ್ ಮಧ್ಯೆ ಪ್ರವೇಶಿಸುವ ಸಾಧ್ಯತೆ ಇದೆ. ಈ ಬಗ್ಗೆ ಕಾಂಗ್ರೆಸ್ ನಾಯಕರ ಜೊತೆ ಸಭೆ ನಡೆಸಲು ತೀರ್ಮಾನಿಸಿದೆ. ಸಿದ್ದರಾಮಯ್ಯ ಅವರಿಗೆ ವಿಪಕ್ಷ ನಾಯಕನ ಸ್ಥಾನ ತಪ್ಪಿಸಲು ಹಲವು ಕೈ ನಾಯಕರು ಲಾಬಿ ನಡೆಸುತ್ತಿದ್ದಾರೆ.