ಬಾಗಲಕೋಟೆ, ಜನವರಿ,18,2023(www.justkannada.in): ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ದೈವವಾಣಿ ನುಡಿದ ವಿಚಾರಕ್ಕೆ ಸಂಬಂಧಿಸಿದಂಯತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ, ಈ ಬಾರಿ ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಸ್ಪಷ್ಟನೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ನಾನು ಅಲೆಮಾರಿಯಲ್ಲ 8 ಬಾರಿ ಚುನವಣೆಯಲ್ಲಿ ಸ್ಪರ್ಧಿಸಿದ್ದೇನೆ. ಬೇರೆ ಬೇರೆ ಕ್ಷೇತ್ರಗಳಲ್ಲಿ ಸ್ಪರ್ಧಿಸುವವರು ಲೀಡರ್ ಅಲ್ಲವಾ..? ಪ್ರಧಾನಿ ಮೋದಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿರಲಿಲ್ಲವೇ..? ನಾನು ಎರಡೇ ದಿನ ಬಾದಾಮಿ ಕ್ಷೇತ್ರಕ್ಕೆ ಬಂದರೂ ಗೆಲ್ಲಿಸಿದ್ದಾರೆ. ಕೊನೆ ಚುನಾವಣೆ ಅಂತಾ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದೆ. ಅಲ್ಲಿನ ಜನರು ಸೋಲಿಸಿದ್ರು. ಬಾದಾಮಿ ದೂರ ಆಗಿರುವುದಕ್ಕೆ ಹತ್ತಿರಕ್ಕೆ ಹೋಗಿತ್ತಿದ್ದಿನಿ. ವಿಪಕ್ಷ ಸ್ಥಾನದಲ್ಲಿದ್ದರೂ ನಿರೀಕ್ಷೆಗೆ ಮೀರಿ ಕೆಲಸ ಮಾಡಿದ್ದೇನೆ. ಈ ಬಾರಿ ನಾನು ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದರು.
ಸೂರ್ಯ ಪೂರ್ವ ದಿಕ್ಕಿನಲ್ಲಿ ಹುಟ್ಟುವುದು ಎಷ್ಟು ಸತ್ಯವೋ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ. ಸಿಎಂ ಹುದ್ದೆ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.
ಸ್ಯಾಂಟ್ರೋ ರವಿ ನಟೋರಿಯಸ್ ಕ್ರಿಮಿನಲ್. ಸರ್ಕಾರ ಕೇಸ್ ಮುಚ್ಚಿ ಹಾಕೋದಕ್ಕೆ ಎಲ್ಲಾ ಪ್ರಯತ್ನ ಮಾಡುತ್ತಿದೆ. ಯಾವುದೇ ತನಿಖೆ ಮಾಡದೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಿಜೆಪಿಯವರಿಗೆ ಸತ್ಯ ಹೇಳೋದು ಗೊತ್ತಿಲ್ಲ ಬರೀ ಸುಳ್ಳು ಹೇಳುತ್ತಾರೆ. ಸ್ಯಾಂಟ್ರೋ ರವಿ ಜೊತೆ ಬಿಜೆಪಿಯವರು ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಸಿದ್ಧರಾಮಯ್ಯ ಆರೋಪಿಸಿದರು.
Key words: Competition-one -Assembly Constituency-Siddaramaiah