ಮಂಡ್ಯ, ಆಗಸ್ಟ್ 25,2023(www.justkannada.in): ಇತ್ತೀಚಿನ ದಿನಗಳಲ್ಲಿ ಶಿಕ್ಷಣ ವ್ಯವಸ್ಥೆ ಬದಲಾಗಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಕರು ಬೈಯುವಂತಿಲ್ಲ ಹೊಡೆಯುವಂತಿಲ್ಲ ಎಂಬ ನಿಯಮವಿದೆ. ಆದರೆ ಈ ನಿಯಮ ಕೆಲವು ಕಡೆಗಳಲ್ಲಿ ದುರುಪಯೋಗವಾಗುತ್ತಿದೆ. ಹೌದು, ಪೋಷಕರಿಗೆ ದೂರು ನೀಡಿದ್ದಕ್ಕೆ ಉಪನ್ಯಾಸಕರೊಬ್ಬರಿಗೆ ವಿದ್ಯಾರ್ಥಿ ಮಚ್ಚು ತೋರಿಸಿ ಎಚ್ಚರಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮೋ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ತರಗತಿಗೆ ಬರುತ್ತಿಲ್ಲವೆಂದು ತನ್ನ ಬಗ್ಗೆ ಹೆತ್ತವರಿಗೆ ದೂರು ನೀಡಿದ್ದಕ್ಕೆ ವಿದ್ಯಾರ್ಥಿಯೊಬ್ಬ , ಉಪನ್ಯಾಸಕರಿಗೆ ಲಾಂಗ್ ತೋರಿಸಿ ದರ್ಪ ಮೆರೆದಿದ್ದಾನೆ.
ವಿದ್ಯಾರ್ಥಿ ಉದಯ್ ಗೌಡ (18) ಎಂಬ ವಿದ್ಯಾರ್ಥಿ ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮೋ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಈತ ಸರಿಯಾಗಿ ತರಗತಿಗೆ ಹಾಜರಾಗುತ್ತಿರಲಿಲ್ಲವಂತೆ. ಹೀಗಾಗಿ ಉಪನ್ಯಾಸಕ ಚಂದನ್ ಎಂಬುವವರು ಉದಯ್ ಕ್ಲಾಸ್ಗೆ ಸರಿಯಾಗಿ ಬರುತ್ತಿಲ್ಲವೆಂದು ಆತನ ಪೋಷಕರಿಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡ ವಿದ್ಯಾರ್ಥಿ ಉದಯ್ ಗೌಡ ಈ ರೀತಿ ಲಾಂಗ್ ತೋರಿಸಿ ದರ್ಪ ಮೆರೆದಿದ್ದಾನೆ ಎನ್ನಲಾಗಿದೆ.
Key words: complain – parents-student – wepean- lecturer