ಮೈಸೂರು,ಆಗಸ್ಟ್,27,2020(www.justkannada.in): ಕೋಲುಮಂಡೆ ಹಾಡಿನ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿರುವ ರ‍್ಯಾಪರ್ ಚಂದನ್ ಶೆಟ್ಟಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಕೋಲುಮಂಡೆ ಹಾಡನ್ನ ವಿಕೃತಗೊಳಿಸಿ ಅಪಮಾನ ಮಾಡಿದ ಆರೋಪದ ಮೇಲೆ ರ‍್ಯಾಪರ್ ಚಂದನ್ ಶೆಟ್ಟಿ ವಿರುದ್ದ ಮೈಸೂರಿನಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಅಂತರಾಷ್ಟ್ರೀಯ ಕಂಸಾಳೆ ಮಹದೇವಯ್ಯ ಕಲಾಸಂಘದಿಂದ ಡಿಸಿಪಿ ಪ್ರಕಾಶ್ ಗೌಡ ಅವರಿಗೆ ದೂರು ಸಲ್ಲಿಕೆಯಾಗಿದೆ. ಕಂಸಾಳೆ ಕಲಾವಿದರಾದ ಕಂಸಾಳೆ ರವಿ ಎಂಬುವವರು ದೂರು ನೀಡಿದ್ದಾರೆ.
ಇನ್ನು ಕೋಲುಮಂಡೆ ಹಾಡಿಗೆ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆ ಕ್ಷಮೆ ಕೋರಿ ಮರು ಚಿತ್ರೀಕರಣ ಮಾಡುವುದಾಗಿ ಚಂದನ್ ಶೆಟ್ಟಿ ಹೇಳಿದ್ದರು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಂಸಾಳೆ ಕಲಾವಿದ ಹಾಡನ್ನ ಮರು ಚಿತ್ರೀಕರಣವೂ ಮಾಡಬಾರದೆಂದು ಆಗ್ರಹಿಸಿದ್ದಾರೆ. ಇನ್ನು ಈ ಸಂಬಂಧ ಸೆನ್ಸಾರ್ ಮಂಡಳಿಗೂ ದೂರು ನೀಡಲು ಕಂಸಾಳೆ ಕಲಾವಿದರು ನಿರ್ಧರಿಸಿದ್ದಾರೆ.
ರ್ಯಾಪರ್ ಚಂದನ್ ಶೆಟ್ಟಿ ವಿರುದ್ದ ಈಗಾಗಲೇ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿದೆ. ಬಜರಂಗದಳ ಮುಖಂಡ ತೇಜಸ್ ಗೌಡ ಅವರು ಚಂದನ್ ವಿರುದ್ಧ ದೂರು ದಾಖಲಿಸಿದ್ದು, ದೂರು ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಎನ್‍ಸಿಆರ್ ದಾಖಲಿಸಿಕೊಂಡಿದ್ದಾರೆ.
Key words: Complaint -filed – Mysore- against- Chandan Shetty-kolumande song