ಮೈಸೂರು, ಮಾರ್ಚ್ 17, 2020 (www.justkannada.in): ನಗರದ ಮಂಡಿ ಪೊಲೀಸ್ ಠಾಣೆ ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿ ವಿರುದ್ಧ ಆರ್ ಟಿಐ ಕಾರ್ಯಕರ್ತ ಸ್ನೇಹಮಯಿಕೃಷ್ಣ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.
ವ್ಯಕ್ತಿಯೊಬ್ಬರನ್ನು ಪೊಲೀಸ್ ಠಾಣೆಗೆ ಕರೆತಂದು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದು, ಪೊಲೀಸ್ ಠಾಣೆ ಸರ್ಕಲ್ ಇನ್ಸ್ ಪೆಕ್ಟರ್ ನಾರಾಯಣ ಸ್ವಾಮಿ ಹಾಗೂ ಸಿಬ್ಬಂದಿ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಬನ್ನಿಮಂಟಪದ ಯಲ್ಲಮ್ಮ ಕಾಲನಿ ನಿವಾಸಿ ಮುತ್ತುರಾಜ್ ಎಂಬುವವರನ್ನು ಠಾಣೆಗೆ ಎಳೆತಂದು ಹಲ್ಲೆ ನಡೆಸಿದ್ದಾರೆ. ಹಲ್ಲೆ ಬಳಿಕ ಮುತ್ತುರಾಜ್ ಮಿಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಸಹಾಯಕ ಪೊಲೀಸ್ ಆಯುಕ್ತರು ಹಾಗೂ ಡಿಜಿಪಿ ಹಾಗೂ ಡಿಐಜಿ ಅವರಿಗೂ ದೂರು ನೀಡಿದ್ದೇನೆ. ಪ್ರಕರಣದ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.