ಕೊಡಗು,ಡಿ,20,2019(www.justkannada.in): ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿ ಇಬ್ಬರು ಅಮಾಯಕರನ್ನು ಬಲಿ ತೆಗೆದುಕೊಂಡಿರುವ ಘಟನೆಗೆ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಖಂಡನೆ ವ್ಯಾಕ್ತವಾಗಿದೆ.
ಪೋಲಿಸರ ಕ್ರಮ ಖಂಡಿಸಿ ಕೊಡಗು ಜಿಲ್ಲೆಯ ಸಿದ್ದಾಪುರ , ನೆಲ್ಯಹುದಿಕೇರಿ ಸೇರಿದಂತೆ ಹಲವೆಡೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡುವ ಮೂಲಕ ಪೊಲೀಸ್ ರ ನಡೆಯನ್ನ ಖಂಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಿದ್ದು ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿನ್ನೆ ಮಂಗಳೂರಿನಲ್ಲಿ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಇದಕ್ಕೆ ಬೆದರದ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಹಿನ್ನೆಲೆ ಉದ್ರಿಕ್ತರನ್ನ ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ವೇಳೆ ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿದ್ದರು.
Key word: Condemnation- Mangalore- Golibar-Kodagu- district-bandh