MLC ಸೂರಜ್ ರೇವಣ್ಣಗೆ ಷರತ್ತು ಬದ್ಧ ಜಾಮೀನು ಮಂಜೂರು

ಬೆಂಗಳೂರು,ಜುಲೈ,22,2024 (www.justkannada.in):  ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ವಿಧಾನಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ಕೋರ್ಟ್ ಇದೀಗ ಎಂಎಲ್ಸಿ ಸೂರಜ್ ರೇವಣ್ಣಗೆ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 23 ರಂದು ಸೂರಜ್ ರೇವಣ್ಣ ಬಂಧನವಾಗಿತ್ತು. 29 ದಿನಗಳ ಕಾಲ ಸೂರಜ್ ರೇವಣ್ಣ ಜೈಲಿನಲ್ಲಿದ್ದರು.

ಷರತ್ತುಬದ್ದ ಜಾಮೀನು ಮಂಜೂರು ಮಾಡಿರುವ ಕೋರ್ಟ್, ಅರ್ಜಿದಾರರು ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು. ತಿಂಗಳ ಪ್ರತಿ 2ನೇ ಭಾನುವಾರ ತನಿಖೆಗೆ ಹಾಜರಾಗಬೇಕು.  ಸಂತಸ್ತರನ್ನ ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು ಎಂದು ಷರತ್ತು ವಿಧಿಸಿದೆ.

Key words: Conditional bail, granted,MLC, Suraj Revanna