ಬೆಳಗಾವಿ,ಡಿಸೆಂಬರ್ 10,2024 (www.justkannada.in): ಕೊಳ್ಳೇಗಾಲ ಮಾಜಿ ಶಾಸಕ, ಉಗ್ರಾಣ ನಿಗಮದ ಅಧ್ಯಕ್ಷ ಜಯಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಎಸ್.ಎಂ.ಕೃಷ್ಣ ಅವರ ಸಾವಿನ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ ಜಯಣ್ಣ ಅವರ ಸಾವಿನ ಸುದ್ದಿ ಆಘಾತ ತಂದಿದೆ. ಜಯಣ್ಣ ನನ್ನ ಆತ್ಮೀಯರು. ನಮ್ಮ ನಡುವೆ ದೀರ್ಘಕಾಲದ ಒಡನಾಟವಿತ್ತು. ಇವರು 1994 ರಲ್ಲಿ ಜೆಡಿಎಸ್ ನಿಂದ ಹಾಗೂ 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು. ಪಕ್ಷ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮವಹಿಸಿ ಕೆಲಸ ಮಾಡಿದ ಜಯಣ್ಣ ಜನಾನುರಾಗಿ ಶಾಸಕರಾಗಿದ್ದರು. ಜನರ ಕಷ್ಟಗಳಿಗೆ ಸದಾ ಮಿಡಿಯುತ್ತಿದ್ದರು.
ಡಿಸೆಂಬರ್ ಏಳರಂದು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಜೊತೆಗಿದ್ದರು. ಅವರ ಮನೆಯಲ್ಲಿಯೇ ಊಟ ಮಾಡಿ ಬಂದಿದ್ದನ್ನು ಸ್ಮರಿಸಿದ ಸಿಎಂ ಸಿದ್ದರಾಮಯ್ಯ, ಜಯಣ್ಣ ಅವರ ಸಾವು ವೈಯಕ್ತಿಕವಾಗಿ ಆಘಾತ ತಂದಿದೆ. ಅವರ ನಿಧನದಿಂದ ಜನಪ್ರಿಯ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ.
ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Key words: CM Siddaramaiah, condoles, former MLA, S. Jayanna, death