ನವದೆಹಲಿ, ಮೇ 10, 2020 (www.justkannada.in): ಭಾರತೀಯ ಮತ್ತು ಚೀನಾದ ಸೈನಿಕರ ನಡುವೆ ಘರ್ಷಣೆ ಸಂಭವಿಸಿದೆ. ಉತ್ತರ ಸಿಕ್ಕಿಂನಲ್ಲಿ ಉಭಯ ದೇಶಗಳ ಸೈನಿಕರ ನಡುವೆ ಘರ್ಷಣೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಈ ಘರ್ಷಣೆ ನಾ ಕುಲಾ ಪ್ರಾಂತ್ಯದಲ್ಲಿ ನಡೆದಿದೆ ಎನ್ನಲಾಗಿದ್ದು, ವರದಿಗಳ ಪ್ರಕಾರ, ಎರಡೂ ಕಡೆಗಳಲ್ಲಿ ಸುಮಾರು ಅರ್ಧ ಡಜನ್ ಗೂ ಅಧಿಕ ಸೈನಿಕರು ಗಾಯಗೊಂಡಿದ್ದಾರೆ. ಈ ಕುರಿತು ಅಧಿಕೃತವಾಗಿ ಯಾವುದೇ ಮಾಹಿತಿ ಬಹಿರಂಗಗೊಂಡಿಲ್ಲ.
ಆದರೂ. ಕೂಡ ಸದ್ಯ ಮಾತುಕತೆ ನಡೆಸುವ ಮೂಲಕ ಸಮಸ್ಯೆ ಬಗೆಹರಿಸಲಾಗಿದೆ ಎನ್ನಲಾಗಿದೆ. 2017 ರಲ್ಲಿ ಇದೇ ಸ್ಥಳದಲ್ಲಿ ಭಾರತ ಹಾಗೂ ಚೀನಾ ಸೈನಿಕರ ನಡುವೆ ತೀವ್ರ ಮಾರಾಮಾರಿ ನಡೆದಿತ್ತು.