ಹುಬ್ಬಳ್ಳಿ,ಮೇ,5,2023(www.justkannada.in): ಭಜರಂಗದಳ ನಿಷೇಧದ ವಿಚಾರದಲ್ಲಿ ಕಾಂಗ್ರೆಸ್ನಲ್ಲಿಯೇ ಗೊಂದಲವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದರು.
ಈ ಕುರಿತು ಇಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವೀರಪ್ಪ ಮೊಹ್ಲಿ ಅವರು ನಾವು ಬಜರಂಗದಳವನ್ನು ಬ್ಯಾನ್ ಮಾಡುವುದಿಲ್ಲ ಎಂದು ಹೇಳಿದರೇ ರಣದೀಪ್ ಸಿಂಗ್ ಸುರ್ಜೇವಾಲಾ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾವು ಭಜರಂಗದಳವನ್ನ ನಿಷೇಧ ಮಾಡಿಯೇ ಮಾಡುತ್ತೇವೆ ಎನ್ನುತ್ತಿದ್ದಾರೆ. ಈ ವಿಚಾರದಲ್ಲಿ ಅವರಲ್ಲಿಯೇ ಸ್ಪಷ್ಟತೆ ಇಲ್ಲ. ಬಜರಂಗದಳ ಭಯ ಎಷ್ಟ ಇದೆ ಎನ್ನುವುದನ್ನು ಕಾಂಗ್ರೆಸ್ ನವರು ನೋಡಿಕೊಳ್ಳಿ ಎಂದು ಕಿಡಿಕಾರಿದರು.
ಬಜರಂಗದಳ ನಿಷೇಧ ಮಾಡುವುದರ ಬಗ್ಗೆ ಜಗದೀಶ್ ಶೆಟ್ಟರ್ ತಮ್ಮ ನಿಲುವನ್ನು ವ್ಯಕ್ತಪಡಿಸಬೇಕೆಂದು ನಾನು ವಿನಂತಿ ಮಾಡುತ್ತೇನೆ ಎಂದು ಪ್ರಹ್ಲಾದ್ ಜೋಶಿ ಆಗ್ರಹಿಸಿದರು.
Key words: Confusion – Congress -r Bajrang Dal -ban – Union Minister -Prahlad Joshi