ಬೆಂಗಳೂರು,ಜು,19,2019(www.justkannada.in): 15 ಅತೃಪ್ತ ಶಾಸಕರಿಗೆ ವಿಪ್ ಜಾರಿ ವಿಚಾರದಲ್ಲಿ ಉಂಟಾಗಿರುವ ಗೊಂದಲ ಇತ್ಯಾರ್ಥಪಡಿಸುವಂತೆ ಇದೀಗ ರಾಜ್ಯ ಕಾಂಗ್ರೆಸ್ ಮತ್ತು ಸಿಎಂ ಹೆಚ್.ಡಿ ಕುಮಾರಸ್ವಾಮಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ಜುಲೈ 17 ರಂದು ಸುಪ್ರೀಂಕೋರ್ಟ್ ನೀಡಿದ್ದ ಮಧ್ಯಾಂತರ ಆದೇಶದಲ್ಲಿ ಅತೃಪ್ತ ಶಾಸಕರಿಗೆ ವಿಪ್ ಜಾರಿ ಕುರಿತು ಗೊಂದಲವಿದೆ. ಈ ಗೊಂದಲವನ್ನ ಬಗೆಹರಿಸುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪರ ವಕೀಲರು ಮತ್ತು ಸಿಎಂ ಹೆಚ್.ಡಿ ಕುಮಾರಸ್ವಾಮಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಜುಲೈ 17ರಂದು ಸುಪ್ರೀಂಕೋರ್ಟ್ ನೀಡಿದ್ದ ಮಧ್ಯಂತರ ಆದೇಶದಲ್ಲಿ ಅತೃಪ್ತ ಶಾಸಕರಿಗೆ ವಿಪ್ ಅನ್ವಯವಾಗಲ್ಲ. ಸದನಕ್ಕೆ ಹಾಜರಾಗುವಂತೆ ಶಾಸಕರಿಗೆ ಒತ್ತಡ ಹೇರುವಂತಿಲ್ಲ ಎಂದು ಹೇಳಲಾಗಿತ್ತು.
Key words: confusion – whip –enforcement-Congress – CM HD Kumaraswamy-Supreme Court.