ಮೈಸೂರು,ಆಗಸ್ಟ್,9,2021(www.justkannada.in): ಸಿಎಂ ಆದ ಮೊದಲ ಬಾರಿಗೆ ಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮೈಸೂರು ಬಿಜೆಪಿ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದರು.
ಮೈಸೂರು ಬಿಜೆಪಿ ಕಚೇರಿ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿಗೆ ಮೈಸೂರು ಭಾಗದ ಬಿಜೆಪಿ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು. ಸಿಎಂಗೆ ಹೂ ಗುಚ್ಚ ನೀಡಿ ಬಿಜೆಪಿ ಜಿಲ್ಲಾ- ನಗರಾಧ್ಯಕ್ಷರು, ನಿಗಮ ಮಂಡಳಿ ಅಧ್ಯಕ್ಷರು ಸ್ವಾಗತಿಸಿದರು.
ಬಿಜೆಪಿ ಕಚೇರಿಯ ಭಾರತ ಮಾತೆ ಭಾವಚಿತ್ರಕ್ಕೆ ಸಿಎಂ ಬೊಮ್ಮಾಯಿ ಪುಷ್ಪಾರ್ಚನೆ ಸಲ್ಲಿಸಿದರು. ಸಿಎಂಗೆ ಸಚಿವರಾದ ಸುಧಾಕರ್, ಗೋಪಾಲಯ್ಯ, ವಿ.ಸೋಮಣ್ಣ, ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜು, ಕೆ.ಸಿ.ನಾರಾಯಯೌಡ, ಮುರುಗೇಶ್ ನಿರಾಣಿ ಸಾಥ್ ನೀಡಿದರು.
ಬಿಜೆಪಿ ಕಚೇರಿ ಮುಂಭಾಗದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ನೂತನ ಸಚಿವರಿಗೆ ಮೈಸೂರು ಬಿಜೆಪಿ ನಗರ ಹಾಗೂ ಜಿಲ್ಲಾ ವಿಭಾಗದಿಂದ ಅಭಿನಂದನೆ ಸಲ್ಲಿಸಲಾಯಿತು.
ಬಿಜೆಪಿಯ ಅಭಿನಂದನಾ ಕಾರ್ಯಕ್ರಮಕ್ಕೂ ಶಾಸಕ ರಾಮದಾಸ್ ಗೈರು..
ಬಿಜೆಪಿಯ ಅಭಿನಂದನಾ ಕಾರ್ಯಕ್ರಮಕ್ಕೂ ಶಾಸಕ ರಾಮದಾಸ್ ಗೈರಾಗುವ ಮೂಲಕ ಮತ್ತೆ ತಮ್ಮ ಅಸಮಾಧಾನ ತೋರ್ಪಡಿಸಿದ್ದಾರೆ.
ಅಭಿನಂದನಾ ಕಾರ್ಯಕ್ರಮದಲ್ಲಿ ಮೈಸೂರಿನ ಸ್ಥಳೀಯ ಶಾಸಕ ಎಲ್.ನಾಗೇಂದ್ರ ಸೇರಿ ನಿಗಮ ಮಂಡಳಿ ಅಧ್ಯಕ್ಷರು ಹಾಜರರಿದ್ದರು. ಆದರೆ.ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಶಾಸಕ ಎಸ್.ಎ ರಾಮದಾಸ್ ಅಸಮಾಧಾನ ಹೊರಹಾಕಿದ್ದಾರೆ.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಇವತ್ತು ಈ ಸ್ಥಾನದಲ್ಲಿ ಇರುವುದಕ್ಕೆ ನಮ್ಮ ಕಾರ್ಯಕರ್ತರು ಕಾರಣ. ಕಾರ್ಯಕರ್ತರ ಪರಿಶ್ರಮ ದಿಂದ ನಮ್ಮ ಸರ್ಕಾರ ಅಧಿಕಾರ ಬಂದಿದೆ. ನಮ್ಮ ಸರ್ಕಾರ ಬಂದು ಎರಡು ವರ್ಷದಲ್ಲಿ ಕೋವಿಡ್ ನಿಯಂತ್ರಣ ಮಾಡಿದ್ದೇವೆ. ನಮ್ಮ ಅಧಿಕಾರದ ಅವಧಿಯಲ್ಲಿ ದೊಡ್ಡ ಸಮರ ಸಾರಿದ್ದೇವೆ. ನಮ್ಮ ಪ್ರಧಾನಿಗಳ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೀದೇವೆ. ವಿಶ್ವದಲ್ಲಿ ಅತಿ ಹೆಚ್ಚು ಸದಸ್ಯರುವ ಪಕ್ಷ ಬಿಜೆಪಿ. ಯಡಿಯೂರಪ್ಪನವರು ಕಟ್ಟಿರುವ ಪಕ್ಷವನ್ನು ಮರೆಯುವುದಕ್ಕೆ ಸಾಧ್ಯವಿಲ್ಲ ಎಂದರು.
ಆನಂದ್ ಸಿಂಗ್ ಅಸಮಾಧಾನ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಸಂಬಂಧ ಆನಂದ್ ಸಿಂಗ್ ನನ್ನನ್ನು ಭೇಟಿ ಮಾಡಿ ಮಾತನಾಡಿದ್ದಾರೆ. ಅವರಿಗೆ ಮನವರಿಕೆ ಮಾಡಿ ಕೊಟ್ಡಿದ್ದೇನೆ. ಇದಕ್ಕೆ ಅವರು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
Key words: Congratulations –CM Basavaraj Bommai –Mysore- BJP- activists.