ತುಮಕೂರು,ಫೆಬ್ರವರಿ,16,2023(www.justkannada.in): ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ರೇಸ್ ನಲ್ಲಿ 10 ನಾಯಕರಿದ್ದಾರೆ. ಅದರಲ್ಲಿ ನಾನೂ ಕೂಡ ಸಿಎಂ ಹುದ್ದೆಯ ಆಕಾಂಕ್ಷಿ ಎಂದು ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಇಂಗಿತ ವ್ಯಕ್ತಪಡಿಸಿದರು.
ತುಮಕೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಜಿ.ಪರಮೇಶ್ವರ್, ರಾಜ್ಯದಲ್ಲಿ ನೂರಕ್ಕೆ ನೂರು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. 113ಕ್ಕಿಂತ ಹೆಚ್ಚು ಸ್ಥಾನ ಪಡೆದು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಅಂತಾ ಬೇರೆ ಇಲ್ಲ. ಕಾಂಗ್ರೆಸ್ ನಲ್ಲಿ ಜಾತಿಯಾಧಾರಿತ ಸಿಎಂ ಅಂತ ಮಾಡಲ್ಲ. ಆ ಸಂದರ್ಭಕ್ಕೆ ಯಾರು ಸಮರ್ಥರಿದ್ದಾರೆ ಅವರನ್ನ ಸಿಎಂ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಪಕ್ಷದ ಧ್ಯೇಯೋಧ್ದೇಶ ಮುನ್ನೆಡೆಸುವ ಸಾಮರ್ಥ್ಯ ಇರುವವರು ಸಿಎಂ ಆಗುತ್ತಾರೆ ಎಂದರು.
ಕಾಂಗ್ರೆಸ್ 10 ನಾಯಕರು ಸಿಎಂ ಹುದ್ದೆ ರೇಸ್ ನಲ್ಲಿದಾರೆ ಅದರನ್ವಯ ನಾನೂ ಕೂಡ ಸಿಎಂ ಹುದ್ದೆ ಆಕಾಂಕ್ಷಿ. ಆದ್ರೆ ಸಿಎಂ ಯಾರಾಗಬೇಕೆಂದು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಪರಮೇಶ್ವರ್ ಹೇಳಿದರು.
Key words: Congress -10 leaders – CM- post- race-Dr. G. Parameshwar.