ಬೆಂಗಳೂರು,ಮೇ,5,2023(www.justkannada.in): ಮೇ 6 ಮತ್ತು 7ರಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದು ಈ ವೇಳೆ ಈ ವೇಳೆ ಆಂಬುಲೆನ್ಸ್ಗಳನ್ನ ತರೋದಕ್ಕೆ ಕಾಂಗ್ರೆಸ್ ಸಂಚು ಮಾಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾಕರಂದ್ಲಾಜೆ, ಯಾವುದೇ ಆಂಬುಲೆನ್ಸ್ಗೂ ರೋಡ್ ಶೋ ವೇಳೆ ಭಂಗ ಮಾಡದೇ ಹೋಗಲು ಅವಕಾಶ ಇದೆ. ಆದರೆ ಆಂಬುಲೆನ್ಸ್ ಗಳಲ್ಲಿ ರೋಗಿ ಇದಾರಾ? ಇಲ್ವಾ. ಎಂದು ತಪಾಸಣೆ ಮಾಡುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಏಕೆಂದರೇ ರೋಡ್ ಶೋ ವೇಳೆ ಆ್ಯಂಬುಲೆನ್ಸ್ ಗಳನ್ನ ತರಲು ಕಾಂಗ್ರೆಸ್ ಷಡ್ಯಂತ್ರ ನಡೆಸಿದೆ ಎಂದು ಕಿಡಿಕಾರಿದರು.
ಮೇ 7ಕ್ಕೆ ನೀಟ್ ಪರೀಕ್ಷೆ ಹಿನ್ನೆಲೆ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ. ನೀಟ್ ಪರೀಕ್ಷೆ ಬಗ್ಗೆ ಪ್ರಧಾನಮಂತ್ರಿ ಮೋದಿ ಗಮನಕ್ಕೆ ತಂದಿದದು, ರೋಡ್ ಶೋನಿಂದ ಒಬ್ಬ ವಿದ್ಯಾರ್ಥಿಗೂ ತೊಂದರೆ ಆಗಬಾರದು ಎಂದಿದ್ದಾರೆ. ಅದ್ದರಿಂದ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ, ಶನಿವಾರ ಮೋದಿ 26.5 ಕಿ.ಮೀ ರೋಡ್ ಶೋ ನಡೆಸಲಿದ್ದು, ಮತ್ತು ಭಾನುವಾರ ಚಿಕ್ಕ ರೋಡ್ ಶೋ ಇರುತ್ತದೆ. ಜೊತೆಗೆ ಮೋದಿ ರೋಡ್ ಶೋ ಮಾರ್ಗದಲ್ಲಿ ಕಡಿಮೆ ಪರೀಕ್ಷಾ ಕೇಂದ್ರಗಳಿವೆ. ಹಾಲ್ ಟಿಕೆಟ್ ತೋರಿಸಿದರೆ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದು. ಪರೀಕ್ಷಾ ಕೇಂದ್ರಕ್ಕೆ ಹೋಗಲು ಅವಕಾಶ ಕೊಡಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.
Key words: Congress -ambulances – PM Modi-road show-Shobha Karandlaje