ನವದೆಹಲಿ,ಮಾರ್ಚ್,21,2024(www.justkannada.in): ಕಾಂಗ್ರೆಸ್ ಬ್ಯಾಂಕ್ ಖಾತೆ ಫ್ರೀಜ್ ಮಾಡಲಾಗಿದ್ದು ಇದು ಕೇಂದ್ರ ಸರ್ಕಾರದ ಅಸಂವಿಧಾನಿಕ, ಕಾನೂನುಬಾಹಿರ ನಡೆ ಎಂದು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದರು.
ಇಂದು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜಂಟಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಸೋನಿಯಾ ಗಾಂಧಿ, ವಿಪಕ್ಷಗಳ ಬ್ಯಾಂಕ್ ಖಾತೆ ಪ್ರೀಜ್ ಮಾಡಿರೋದು ಗಂಭೀರ ವಿಷಯ. ಇದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸಂಬಂಧಿಸಿದ್ದಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂಬಂಧಿಸಿದ್ದು. ಮೋದಿ ಸರ್ಕಾರ ಕಾಂಗ್ರೆಸ್ ಕಟ್ಟಿ ಹಾಕುವ ಕೆಲಸ ಮಾಡುತ್ತಿದೆ. ಚುನಾವಣಾ ಬಾಂಡ್ ಮೂಲಕ ಬಿಜೆಪಿಗೆ ಹೆಚ್ಚಿನ ಹಣ ಬಂದಿದೆ ಆದರೆ. ನಮ್ಮ ಖಾತೆಗಳಿಂದ ಬಲವಂತವಾಗಿ ಹಣ ಕಿತ್ತುಕೊಳ್ಳುತ್ತಿದ್ದಾರೆ. ನಮ್ಮ ಬ್ಯಾಂಕ್ ಖಾತೆ ಪ್ರೀಜ್ ಮಾಡಿರೋದು ಸರಿಯಲ್ಲ. ಬ್ಯಾಂಕ್ ಖಾತೆ ಪ್ರೀಜ್ ನಿಂದ ನಮಗೆ ಬಹಳ ಕಷ್ಟ ಆಗುತ್ತಿದೆ. ಆರ್ಥಿಕವಾಗಿ ಕಾಂಗ್ರೆಸ್ ಶಕ್ತಿ ಕುಗ್ಗಿಸಲು ಯತ್ನ ಮಾಡಲಾಗುತ್ತಿದೆ. ಇದರ ಎಫೆಕ್ಟ್ ದೇಶದ ಪ್ರಜಾಪ್ರಭುತ್ವದ ಮೇಲೆ ಆಗುತ್ತೆ ಎಂದು ಸೋನಿಯಾ ಗಾಂಧಿ ಹರಿಹಾಯ್ದರು.
Key words: Congress- bank account- freeze- Unconstitutional- illegal -move -y Centre- Sonia Gandhi