ಬೆಂಗಳೂರು,ಜೂನ್,20,2023(www.justkannada.in): ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಭಟನೆಗೆ ಮುಂದಾಗಿದ್ದು ಈ ಹಿನ್ನಲೆಯಲ್ಲಿ ಪ್ರತಿಭಟನಾ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.
ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಹಿನ್ನೆಲೆ ಫ್ರೀಡಂಪಾರ್ಕ್ನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ವಿರುದ್ದ ಮೌರ್ಯ ಸರ್ಕಲ್ ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಹಿನ್ನಲೆ ಎರಡು ಕಡೆ 500ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಡಿಸಿಪಿಗಳಾದ ಶ್ರೀನಿವಾಸಗೌಡ, ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. 6 ಎಸಿಪಿ, 25 ಪಿಐ ಸೇರಿ 500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದ್ದು, ಬಿಜೆಪಿ ಮುಖಂಡರ ಪ್ರತಿಭಟನೆ ಸ್ಥಳದಲ್ಲಿ KSRP ತುಕಡಿ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ ಮೆಜೆಸ್ಟಿಕ್ ನಿಂದ ಕೆ.ಆರ್ ಮಾರ್ಕೆಟ್ ವರೆಗೂ ಟ್ರಾಫಿಕ್ ಸಮಸ್ಯೆ ಎದುರಾಗುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಸಂಚಾರಿ ಪೊಲೀಸರ ನಿಯೋಜನೆ ಮಾಡಲಾಗಿದೆ.
Key words: Congress –BJP- protest –Bangalore- today-Police- tight security