ಬಿಜೆಪಿ ಮತ್ತು ಜೆಡಿಎಸ್ ವಿರುದ್ದ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು.

ಬೆಂಗಳೂರು,ಏಪ್ರಿಲ್,25,2024 (www.justkannada.in):  ಗ್ಯಾರಂಟಿ ಯೋಜನೆಗಳ ಕುರಿತು ಅಪಪ್ರಚಾರ ನಡೆಸಿದ್ದಾರೆಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್ ನಾಯಕರ  ವಿರುದ್ದ ಚುನಾವಣಾ ಆಯೋಗಕ್ಕೆ  ಕಾಂಗ್ರೆಸ್ ದೂರು ನೀಡಿದೆ ಎನ್ನಲಾಗಿದೆ.

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಅಪಪ್ರಚಾರ ಮಾಡಿದ್ದು  ಕ್ರಮಕ್ಕೆ ಮನವಿ ಮಾಡಿ ಕಾಂಗ್ರೆಸ್ ದೂರು ದಾಖಲಿಸಿದೆ ಎನ್ನಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿರುವ ವಿಪಕ್ಷಗಳ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Congress, complaint, BJP, JDS