ನವದೆಹಲಿ,ಸೆಪ್ಟಂಬರ್,19,2023(www.justkannada.in): ಇಂದು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆಯಾಗಿದ್ದು ಈ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, 2010ರಲ್ಲಿಯೇ ನಾವು ಮಹಿಳಾ ಮೀಸಲಾತಿ ಬಿಲ್ ಮಂಡಿಸಿದ್ದೆವು, ಹೀಗಾಗಿ ಇದರ ಶ್ರೇಯಸ್ಸು ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು ಎಂದರು. ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದರ ಜೊತೆಗೆ ಮಹಿಳಾ ಮೀಸಲಾತಿ ಬಿಲ್ ನಲ್ಲಿ ಒಬಿಸಿ ಒಳ ಮೀಸಲಾತಿಗೆ ಮನವಿ ನೀಡುವಂತೆ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.
Key words: Congress – credited – Women’s Reservation Bill – AICC President- Mallikarjuna Kharge