ಚಿಕ್ಕಮಗಳೂರು,ಜನವರಿ,1,2020(www.justkannada.in): ಯಾವುದೇ ಚುನಾವಣೆ ಬಂದ್ರೂ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಟೀಕಿಸಿದರು.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಇಂದು ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಕೇಂದ್ರ ಮತ್ತು ರಾಜ್ಯ ಕಾಂಗ್ರೆಸ್ ನಲ್ಲಿ ಒಳ ಜಗಳ ಹೆಚ್ಚಾಗಿದೆ. ರಾಜ್ಯದಲ್ಲಿ ಯಾವುದೇ ಚುನಾವಣೆ ಬಂದರೂ ಕಾಂಗ್ರೆಸ್ ಗೆಲ್ಲುವುದಿಲ್ಲ. ಸದ್ಯ ಕಾಂಗ್ರೆಸ್ ಕಳೆದು ಹೋಗಿದೆ ಎಂದು ಲೇವಡಿ ಮಾಡಿದರು.
ಗ್ರಾಮಪಂಚಾಯಿತಿ ಚುನಾವಣೆ ಫಲಿತಾಂಶ ಕುರಿತು ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಶೇ60 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ. ಆದರೆ ಇದನ್ನ ಒಪ್ಪಿಕೊಳ್ಳಲಾಗದೆ ಸಿದ್ಧರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಎಂದು ಟಾಂಗ್ ನೀಡಿದರು.
Key words: Congress -did not- win -any election- DCM- Ashwath Narayan