ಮಂಗಳೂರು,ಮೇ,3,2023(www.justkannada.in): ಕಾಂಗ್ರೆಸ್ ಅಭಿವೃದ್ಧಿ ಬಗ್ಗೆ ಯೋಚನೆ ಮಾಡುವುದಿಲ್ಲ. ಕಾಂಗ್ರೆಸ್ ರಾಜ್ಯದಲ್ಲಿ ಅಶಾಂತಿಯನ್ನು ಹುಟ್ಟು ಹಾಕುತ್ತದೆ. ಹೀಗಾಗಿ ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಮಂಗಳೂರಿನಲ್ಲಿ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕವನ್ನು ಉತ್ಪಾದನೆಯ ಅತಿ ದೊಡ್ಡ ಶಕ್ತಿ ರಾಜ್ಯ ಮಾಡುವ ಸಂಕಲ್ಪ ಮಾಡಿದ್ದೇವೆ. ಯುವ ಹೊಸ ಮತದಾರರು ಕರ್ನಾಟಕದ ಭವಿಷ್ಯವನ್ನು ನಿರ್ಧಾರ ಮಾಡುತ್ತಾರೆ. ಯುವ ಮತದಾರರು ನಿಮ್ಮ ಭವಿಷ್ಯ ಉಜ್ವಲವಾಗಿರಬೇಕಾದರೇ ಬಿಜೆಪಿಗೆ ಮತ ನೀಡಿ. ಕಾಂಗ್ರೆಸ್ನಿಂದ ಇದು ಸಾಧ್ಯವಾಗುವುದಿಲ್ಲ. ಕಾಂಗ್ರೆಸ್ ರಾಜ್ಯದಲ್ಲಿ ಅಶಾಂತಿಯನ್ನು ಹುಟ್ಟು ಹಾಕುತ್ತದೆ ಎಂದು ವಾಗ್ದಾಳಿ ನಡೆಸಿದರು.
ಪಿಎಂ ಕಿಸಾನ್ ಯೋಜನೆಯಡಿ ನೀಡಲಾದ ಹಣ ಹೆಚ್ಚಿನದಾಗಿ ಮಹಿಳಾ ರೈತರಿಗೆ ದೊರೆತಿದೆ. ಅದೇ ರೀತಿ ಮುದ್ರಾ ಯೋಜನೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಅನುಕೂಲವಾಗಿದೆ. ಗೂಡಿಸಲಿನಲ್ಲಿ ವಾಸಿಸುವ ಮಹಿಳೆಯರು ಇಂದು ಲಕ್ಷಾಧಿಪತಿಗಳಾಗಿದ್ದಾರೆ. ದೇಶದ ಮಕ್ಕಳು ಜಿ 20 ಬಗ್ಗೆ ಮಾತನಾಡುತ್ತಿದ್ದಾರೆ. ಜಿ-20ಯಲ್ಲಿ ಮಹಿಳಾ ನೇತೃತ್ವದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ದೆಹಲಿಯಲ್ಲಿ ಈ ಹಿಂದೆ ದೆಹಲಿಯಲ್ಲಿ ಕೂತಿದ್ದ ಸರ್ಕಾರ ಅಭಿವೃದ್ಧಿ ಬಗ್ಗೆ ಯೋಚನೆ ಮಾಡುತ್ತಿರಲಿಲ್ಲ ಎಂದು ಟೀಕಿಸಿದರು.
ಸಿದ್ಧರಾಮಯ್ಯಗೆ ಪರೋಕ್ಷ ಟಾಂಗ್.
ಇದೇ ವೇಳೆ ಮಾಜಿ ಸಿಎಂ ಸಿದ್ಧರಾಮಯ್ಯಗೆ ಪರೋಕ್ಷ ಟಾಂಗ್ ನೀಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮತ ಏಕೆ ಕೇಳುತ್ತಿದ್ದಾರೆ ಅಂದರೇ ಅವರ ಒಬ್ಬ ನಾಯಕ ನಿವೃತ್ತಿ ಹೊಂದುತ್ತಿದ್ದಾರೆ. ಅವರನ್ನು ಗೆಲ್ಲಿಸಲು ಮತ ಕೇಳುತ್ತಿದ್ದಾರೆ. ಕಾಂಗ್ರೆಸ್ ಬಿಜೆಪಿಯ ಎಲ್ಲ ಯೋಜನೆಗಳನ್ನು ನಾಶ ಮಾಡಲು ಮತ ಕೇಳುತ್ತಿದೆ ಎಂದು ಲೇವಡಿ ಮಾಡಿದರು.
Key words: Congress-does not -think – development-PM-Narendra Modi.