ಮೈಸೂರು,ಆ,14,2020(www.justkannada.in): ಬೆಂಗಳೂರಿನ ಕೆ.ಜಿ ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ಕಾಂಗ್ರೆಸ್ ನ ಪಾಪದ ಕೂಸು. ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಬೀಳಲು ಕಾಂಗ್ರೆಸ್ ಕಾರಣ ಎಂದು ಎಂಎಲ್ ಸಿ ಹೆಚ್.ವಿಶ್ವನಾಥ್ ಆರೋಪಿಸಿದರು.
ಬೆಂಗಳೂರಿನ ಕೆ.ಜಿ ಹಳ್ಳಿ ಗಲಭೆ ಪ್ರಕರಣ ಕುರಿತು ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ವಿಶ್ವನಾಥ್, ಗಲಭೆಗೂ ಬಿಜೆಗೂ ಯಾವುದೇ ಸಂಬಂಧ ಇಲ್ಲ. ಇದು ಕಾಂಗ್ರೆಸ್ ಹಾಗೂ ಸ್ಥಳೀಯ ಸಂಘಟನೆಗೂ ನಡೆಯುತ್ತಿರುವ ಗಲಭೆ. ಸಿಎಎ ಹೋರಾಟದಲ್ಲಿ ಪ್ರಚೋದನಕಾರಿ ಭಾಷಣಗಳು ಇದಕ್ಕೆಲ್ಲಾ ಕಾರಣ. ವಿಪಕ್ಷಗಳು ಜನರನ್ನು ಉದ್ರೇಕಗೊಳಿಸಿದ್ದು ಇನ್ನೂ ಬಿಸಿ ಕೆಂಡವಾಗಿ ಉಳಿದಿದೆ. ಆ ಕೆಂಡವನ್ನೇ ಇಟ್ಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಬೆಂಕಿ ಬಿದ್ದ ಮನೆಗೆ ಹೋಗದೇ ಬೆಂಕಿ ಹಾಕಿದವರ ಮನೆಗೆ ಹೋಗಿ ಸಾಂತ್ವಾನ- ಜಮೀರ್ ವಿರುದ್ದ ಕಿಡಿ..
ಇದೇ ವೇಳೆ ಶಾಸಕ ಜಮೀರ್ ಅಹ್ಮದ್ ವಿರುದ್ದ ಕಿಡಿಕಾರಿದ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಜಮೀರ್ ಅಹಮ್ಮದ್ ಬೆಂಕಿ ಬಿದ್ದ ಮನೆಗೆ ಹೋದಿ ಸಾಂತ್ವನ ಹೇಳಿಲ್ಲ. ಬೆಂಕಿ ಹಾಕಿದವರ ಮನೆಗೆ ಹೋಗಿ ಸಾಂತ್ವನ ಹೇಳಿದ್ದಾರೆ. ಪಾದರಾಯನಪುರ ವಿಚಾರದಲ್ಲಿ ಜೈಲಿಗೆ ಹೋಗಿ ಬಂದವರನ್ನ ಮಾಲೆ ಹಾಕಿ ಸ್ವಾಗತಿಸಿದ್ರು. ಇವರೇನು ಸ್ವಾತಂತ್ರ್ಯ ಹೋರಾಟ ಮಾಡಲು ಹೋಗಿದ್ರಾ..? ಎಂದು ಪ್ರಶ್ನಿಸಿದರು.
Key words: Congress – fire – house -akhand Srinivas Murthy- MLC-H. Vishwanath