ಬೆಂಗಳೂರು,ಜುಲೈ,31,2023(www.justkannada.in): ರಾಜ್ಯ ಕಾಂಗ್ರೆಸ್ ನಲ್ಲಿ ಅಸಮಾಧಾನ ಹಿನ್ನೆಲೆ ಸಭೆ ನಡೆಸಿ ಚರ್ಚಿಸಲು ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ 19 ಸಚಿವರಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಜಿ. ಪರಮೇಶ್ವರ್, ಎಂ.ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಹೆಚ್. ಕೆ ಪಾಟೀಲ್, ಮುನಿಯಪ್ಪ, ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಜಮೀರ್ ಅಹ್ಮದ್, ಚೆಲುವರಾಯಸ್ವಾಮಿ, ಶಿವಾನಂದ ಪಾಟೀಲ್, ಎಸ್ .ಎಸ್ ಮಲ್ಲಿಕಾರ್ಜುನ, ಮಧು ಬಂಗಾರಪ್ಪ, ಎನ್. ಎಸ್ ಬೋಸರಾಜು, ಪ್ರಿಯಾಂಕ್ ಖರ್ಗೆಗೆ ಬುಲಾವ್ ಬಂದಿದೆ ಎನ್ನಲಾಗಿದೆ.
ದೆಹಲಿಯಲ್ಲಿ ಹೈಕಮಾಂಡ್ ಎರಡು ಪ್ರತ್ಯೇಕ ಸಭೆ ನಡೆಸಲಿದ್ದು, ಮೊದಲಿಗೆ ಕಾಂಗ್ರೆಸ್ ಹಿರಿಯ ನಾಯಕರ ಮೀಟಿಂಗ್ ನಡೆಯಲಿದೆ. ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಹರಿಪ್ರಸಾದ್ ಸೇರಿ ಹಲವರು ಭಾಗಿಯಾಗಲಿದ್ದಾರೆ. ಸಭೆ ಬಳಿಕ ಸಚಿವರು ನಾಯಕರ ಜೊತೆ ಸಭೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.
Key words: Congress -High Command – 19 Ministers – CM- DCM-dehli