ನವದೆಹಲಿ,ಆಗಸ್ಟ್,7,2023(www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಅನರ್ಹತೆಯನ್ನ ಲೋಕಸಭೆ ಸ್ಪೀಕರ್ ಓಂಬಿರ್ಲಾ ಅವರು ವಾಪಸ್ ಪಡೆದಿದ್ದಾರೆ.
ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನವನ್ನು ಪುನಃಸ್ಥಾಪಿಸಲಾಗಿದ್ದು, ಕಲಾಪದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ರಾಹುಲ್ ಗಾಂಧಿಗೆ ವಿಧಿಸಿದ್ದ 2 ವರ್ಷಗಳ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹೀಗಾಗಿ ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಅನರ್ಹತೆಯನ್ನ ವಾಪಸ್ ಪಡೆಯುವಂತೆ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದರು.
ಇದೀಗ ಲೋಕಸಭೆಯಲ್ಲಿ ಇಂದು ಸದಸ್ಯತ್ವವನ್ನು ಮರುಸ್ಥಾಪಿಸುವ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ಇಂದು ಸಂಜೆಯೊಳಗೆ ರಾಹುಲ್ ಗಾಂಧಿಯವರ ಸದಸ್ಯತ್ವವನ್ನು ಮರುಸ್ಥಾಪಿಸದಿದ್ದರೆ, ಕಾಂಗ್ರೆಸ್ ಪಕ್ಷವು ಆಗಸ್ಟ್ 8 ರಂದು ಸುಪ್ರೀಂ ಕೋರ್ಟ್ಗೆ ತೆರಳುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು.
Key words: Congress leader -Rahul Gandhi –mp-position- disqualification – withdrawn