ಬೆಂಗಳೂರು, ಮೇ 20, 2020 (www.justkannada.in): ಎಪಿಎಂಸಿ, ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ (ಕೆಪಿಸಿಸಿ) ಬುಧವಾರ ವಿಧಾನಸೌಧ ಮತ್ತು ವಿಕಾಸಸೌಧ ನಡುವೆ ಇರುವ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಭಿತ್ತಿಫಲಕ ಹಿಡಿದಿದ್ದ ನಾಯಕರು, ಗ್ರಾಮ ಪಂಚಾಯಿತಿಗಳಿಗೆ ತಕ್ಷಣ ಚುನಾವಣೆ ನಡೆಸಬೇಕು ಎಂದು ಘೋಷಣೆ ಕೂಗಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವ ವಹಿಸಿದ್ದರು.