ಬಳ್ಳಾರಿ, ಜುಲೈ 21, 2019 (www.justkannada.in): ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜಿನಾಮೆ ನೀಡಿದ ಬಳಿಕ ಮತ್ತೆ ಪ್ರತ್ಯಕ್ಷರಾಗಿದ್ದಾರೆ.
ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಸಿಗದ ಆನಂದ್ ಸಿಂಗ್ ಅತೃಪ್ತ ಶಾಸಕರ ತಂಡ ಸೇರಿಕೊಂಡಿದ್ದಾರೆ ಎನ್ನಲಾಗಿದ್ದು, ಅವರು ನಾಪತ್ತೆಯಾಗಿರುವ ಸಂಬಂಧ ಕಾಂಗ್ರೆಸ್ ಮುಖಂಡರು ಪೊಲೀಸರಿಗೆ ದೂರನ್ನೂ ನೀಡಿದ್ದರು.
ಆದರೆ ಅವರು ಹೊಸಪೇಟೆ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಾವು ನಾಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ. ತಮ್ಮ ತಂದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಬಳ್ಳಾರಿ ಮತ್ತು ಬೆಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಅವರ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಕಾರಣದಿಂದ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದಾಗಿ ಹೇಳಿದ್ದಾರೆ.ಜತೆಗೆ ಕೈ ಮುಖಂಡರು ಇವರ ಮನವೊಲಿಕೆಗೆ ಮುಂದಾಗಿದ್ದಾರೆ.