ಬೆಂಗಳೂರು, ಜುಲೈ 26, 2023 (www.justkannada.in): ಜುಲೈ 27ಕ್ಕೆ ಶಾಸಕಾಂಗ ಸಭೆ ಕರೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶಾಸಕ ಬಿ.ಆರ್. ಪಾಟೀಲ್ ಸಿಎಂಗೆ ಬರೆದಿದ್ದಾರೆ ಎನ್ನಲಾದ ಪತ್ರದ ವಿಚಾರಕ್ಕೆ ಸಂಬಂಧಿಸಿದಂತೆ ಜುಲೈ 27ಕ್ಕೆ ಶಾಸಕಾಂಗ ಸಭೆ ಕರೆಯಲಾಗಿದೆ. ಅಲ್ಲಿ ಪತ್ರದ ಸತ್ಯಾಂಶದ ಕುರಿತು ಚರ್ಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅಂದಹಾಗೆ 24 ರಂದು ಬಿ.ಆರ್. ಪಾಟೀಲ್ ಹೆಸರಿನಲ್ಲಿ ಸಿಎಂಗೆ ಬರೆದಿದ್ದಾರೆ ಎನ್ನಲಾಗಿರುವ ಪತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಸಹಕಾರ ಹಾಗೂ ಇಲಾಖೆಗೆ ಸಂಬಂಧಿಸಿದ ಅನುದಾನದ ಬೇಡಿಕೆ ಬಗ್ಗೆ ಪ್ರಸ್ತಾಪವಾಗಿತ್ತು.
ಈ ಮೂಲಕ ಬಿ.ಆರ್. ಪಾಟೀಲ್ ಸಿಎಂಗೆ ಪತ್ರ ಬರೆದಿದ್ದಾರೆ ಎನ್ನಲಾದ ಪತ್ರಕ್ಕೆ ಸಂಬಂಧಿಸಿದಂತೆ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಜುಲೈ 27ಕ್ಕೆ ಶಾಸಕಾಂಗ ಸಭೆ ಕರೆಯಲಾಗಿದೆ ಎಂದು ಹೇಳಿದ್ದಾರೆ.