ಬೆಂಗಳೂರು,ಮೇ,2,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು ಚುನಾವಣಾ ಕಣ ರಂಗೇರಿದೆ . ಈ ನಡುವೆ ನಿನ್ನೆಯಷ್ಟೇ ಬಿಜೆಪಿ ತನ್ನ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇದೀಗ ಕಾಂಗ್ರೆಸ್ ಸಹ ತನ್ನ ಪ್ರಣಾಳಿಕೆಯನ್ನ ರಿಲೀಸ್ ಮಾಡಿದೆ.
ಕಾಂಗ್ರೆಸ್ ಬರಲಿದೆ, ಪ್ರಗತಿ ತರಲಿದೆ ಎನ್ನುವ ಘೋಷ ವಾಕ್ಯದೊಂದಿಗೆ ‘ಸರ್ವ ಜನಾಂಗದ ಶಾಂತಿಯ ತೋಟ ಇದುವೆ ಕಾಂಗ್ರೆಸ್ ಬದ್ಧತೆ’ ಎನ್ನುವ ಹೆಸರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಣಾಳಿಕೆಯನ್ನುಬಿಡುಗಡೆಗೊಳಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.
ಪ್ರಣಾಳಿಕೆಯಲ್ಲಿರುವ ಅಂಶಗಳು ಈ ಕೆಳಕಂಡಂತಿದೆ..
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ
ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ
ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ
ರಾತ್ರಿ ಪಾಳಿಯ ಪೊಲೀಸ್ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ
ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್
ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ
ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ.
ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು
ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ.
ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ
ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ ಮುಂತಾದ ಭರವಸೆಗಳನ್ನ ನೀಡಿದೆ.
-V.Mahesh kumar
Key words: Congress –manifesto- release -state -assembly -elections