ಬೆಂಗಳೂರು,ಮಾರ್ಚ್,3,2025 (www.justkannada.in): ಮಾರ್ಚ್ 4 ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನ ಮಾರ್ಚ್ 10ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಾಳೆ ಸಂಜೆ 6.00 ಗಂಟೆಗೆ “ಹೋಟೆಲ್ ಯಾಡಿಸನ್ ಬ್ಲೂ (ಏಟ್ರಿಯಾ)” ನಲ್ಲಿ ‘ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ಯನ್ನು ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಸಭೆಯನ್ನ ದಿನಾಂಕ 10-03-2025ರ ಸೋಮವಾರ ಸಂಜೆ 6.00 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಘಟಕ ತಿಳಿಸಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಸಿಎಂ ಸಿದ್ದರಾಮಯ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿ ಕಾಂಗ್ರೆಸ್ ನಾಯಕರು ಉಪಸ್ಥಿತರಿರಲಿದ್ದಾರೆ.
Key words: Congress, Legislature Party, meeting, postponed