ಬೆಂಗಳೂರು,ಮೇ,26,2023(www.justkannada.in): ಆರ್ ಎಸ್ ಎಸ್ ಗೆ ಕೈ ಹಾಕಿದ್ರೆ ಕಾಂಗ್ರೆಸ್ ಇರಲ್ಲ ಎಂದು ಹೇಳಿಕೆ ನೀಡಿದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಕಾಂಗ್ರೆಸ್ ಟ್ವಿಟ್ ಮಾಡಿ ತಿರುಗೇಟು ನೀಡಿದೆ.
ಈ ಕುರಿತು ಟ್ವಿಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು. ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂಬ ಸರ್ಟಿಫಿಕೇಟ್ ನೀಡಿದ್ದರು. ಕಾಂಗ್ರೆಸ್ ಆಗಲೂ ಇತ್ತು ಈಗಲೂ ಇದೆ, ಮುಂದೆಯೂ ಇರಲಿದೆ. ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ RSS ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು ಎಂದು ತಿಳಿಸಿದೆ.
ಆರ್ಎಸ್ಎಸ್ ನಿಷೇಧ ಬಗ್ಗೆ ಪ್ರಿಯಾಂಕ್ ಖರ್ಗೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ್ದ ನಳಿನ್ ಕುಮಾರ್ ಕಟೀಲ್, ಪ್ರಧಾನಿ, ಕೇಂದ್ರ ಸಚಿವರು, ನಾವೆಲ್ಲರೂ ಆರ್ ಎಸ್ ಎಸ್ ನಿಂದ ಬಂದವರು. ಆರ್ಎಸ್ಎಸ್ ಈ ದೇಶದಲ್ಲಿ ರಾಷ್ಟ್ರ ಭಕ್ತಿ ಕಲಿಸಿದೆ. ನೆಹರೂ, ಇಂದಿರಾ ಎಲ್ಲರೂ ನಿಷೇಧಕ್ಕೆ ಕೈಹಾಕಿ ಕೈಸುಟ್ಟುಕೊಂಡಿದ್ದಾರೆ. ಬಜರಂಗದಳ, ಆರ್ ಎಸ್ ಎಸ್ ನಿಷೇಧಕ್ಕೆ ಕೈಹಾಕಿದರೆ ಕಾಂಗ್ರೆಸ್ ಇರುವುದಿಲ್ಲ ಎಂದು ಎಚ್ಚರಿಸಿದ್ದರು.
Key words: Congress – Naleen Kumar Kateel – RSS