ಕಾಂಗ್ರೆಸ್ ನ ಅಪರೇಷನ್ ಹಸ್ತ ಯಶಸ್ವಿಯಾಗಲ್ಲ – ಮಾಜಿ ಸಿಎಂ ಬೊಮ್ಮಾಯಿ.

ಹುಬ್ಬಳ್ಳಿ,ಆಗಸ್ಟ್,25,2023(www.justkannada.in):  ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಜೆಡಿಎಸ್ ಮುಖಂಡರನ್ನ ಸೆಳೆಯಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಆದರೆ ಕಾಂಗ್ರೆಸ್​​ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ,   ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಸೋಲಿನ ಭೀತಿ ಇದೆ. ರಾಜ್ಯದಲ್ಲಿ ಹೆಚ್ಚು ಲೋಕಸಭಾ ಸೀಟು ಬರಲ್ಲ ಅಂತ ಮಾಹಿತಿ ಇದೆ. ಹೆಚ್ಚು ಸೀಟ್​ ಗೆಲ್ಲದಿದ್ದರೇ ಕಾಂಗ್ರೆಸ್ ಸರ್ಕಾರದ ಭವಿಷ್ಯಕ್ಕೆ ಸಮಸ್ಯೆ ಇದೆ. ಹೀಗಾಗಿ ರಾಜ್ಯದಲ್ಲಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಪಕ್ಷ ಕೈಹಾಕಿದೆ. ಕಾಂಗ್ರೆಸ್​​ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​​ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ನುಡಿದರು.

ಸರ್ಕಾರದ ವಿರುದ್ಧ ಧ್ವನಿ ಎತ್ತುವವರ ಧ್ವನಿ ದಮನ ಮಾಡಲಾಗುತ್ತಿದೆ ಎಂದು ಆರೋಪಿಸಿದ ಬೊಮ್ಮಾಯಿ, ಮಳೆ ಇಲ್ಲದೇ ರಾಜ್ಯದಲ್ಲಿ ಬರಗಾಲದ ಛಾಯೇ ಆವರಿಸಿದೆ. ಹೀಗಾಗಿ ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

Key words: Congress- operation hasta- not -successful – Former CM-Basava Bommai