ಬೆಂಗಳೂರು,ಮಾರ್ಚ್,12,2021(www.justkannada.in): ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಒಪ್ಪಿ ಯಾರೇ ಬಂದರೂ ಪಕ್ಷಕ್ಕೆ ಸ್ವಾಗತಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.
ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವ ಮಧು ಬಂಗಾರಪ್ಪ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದರು. ನಂತರ ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್, ನಮ್ಮ ಪಕ್ಷದ ತತ್ವ ಸಿದ್ದಾಂತ ಒಪ್ಪಿ ಯಾರೇ ಬಂದರೂ ಪಕ್ಷಕ್ಕೆ ಸ್ವಾಗತ ಎಂದು ಕರೆ ನೀಡಿದ್ದವು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಾಯಕರು ಬರ್ತಿದ್ದಾರೆ. ಜೆಡಿಎಸ್ ನಿಂದ ಮಾತ್ರ ಮುಖಂಡರು ಬರುತ್ತಿಲ್ಲ. ಯಾರೇ ಪಕ್ಷಕ್ಕೆ ಬಂದರೂ ಸ್ವಾಗತ. ಬಿಜೆಪಿಯನ್ನ ದೂರ ಇಡಲು ಪ್ರಯತ್ನಿಸುತ್ತಿದ್ದೇವೆ ಎಂದರು.
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ವಿಚಾರ ಎಸ್ ಐಟಿ ತನಿಖೆ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ಕೆಲ ನಾಯಕರು ನಮ್ಮ ಹೆಸರು, ಕಾಂಗ್ರೆಸ್ ಹೆಸರು ಬಳಸುತ್ತಿದ್ದಾರೆ. ಎಸ್ಐಟಿ ತಂಡ ರಚಿಸಕಿ ನೊಡೋಣ ಎಂದರು.
Key words: Congress -principle – welcome – Party-KPCC-president-DK Shivakumar.