ಬೆಂಗಳೂರು,ಜೂನ್,13,2022(www.justkannada.in): ಅಕ್ರಮದಲ್ಲಿ ಭಾಗಿಯಾಗಿಲ್ಲದಿದ್ದರೂ ಸೋನಿಯಾ ಗಾಂಧಿ ರಾಹುಲ್ ಗಾಂಧಿ ಅವರಿಗೆ ಇಡಿ ನೋಟಿಸ್ ನೀಡಲಾಗಿದೆ. ಇದು ಸರ್ಕಾರದ ಧ್ವೇಷದ ರಾಜಕಾರಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕಿಡಿಕಾರಿದರು.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಇಡಿ ನೋಟೀಸ್ ನೀಡಿರುವುದನ್ನ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಈಶ್ವರ್ ಖಂಡ್ರೆ, ನೆಹರೂ ಕುಟುಂಬ ಯಾವುದೇ ಲಾಭ ಮಾಡಿಕೊಂಡಿಲ್ಲ. ಕೇಂಧ್ರದ ಸಂಸ್ಥೆಗ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಉದ್ದೇಶಪೂರ್ವಕವಾಗಿ ರಾಹುಲ್ ಗಾಂಧಿ ಸೋನಿಯಾ ಗಾಂಧಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ.
ಹಿಂದೆ ಬಿಜೆಪಿ ಸರ್ಕಾರವೇ ಅಕ್ರಮವಾಗಿಲ್ಲ ಎಂದಿತ್ತು. ಬಿಜೆಪಿಯ ದ್ವೇಷದ ರಾಜಕಾರಣವನ್ನ ಜನ ಗಮನಿಸುತ್ತಿದ್ದಾರೆ. ನಮ್ಮ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ. ಇದು ಜನ ವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.
Key words: Congress-protests-against-Rahul Gandhi- ED- inquiry-Ishwar Khandre.