ಬೆಂಗಳೂರು,ಜೂನ್,11,2021(www.justkannada.in): ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯನ್ನ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಇಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ನೇತೃತ್ವವದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ. ಧರಣಿ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ತೈಲಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತದೆ. ಹೀಗಾದರೇ ಜನಸಾಮಾನ್ಯರ ಜೀವನ ನಿರ್ವಹಣೆ ಹೇಗೆ. ಮೋದಿ ಅಚ್ಚೇದಿನ್ ಆಯೇಗಾ ಅಂತಿದ್ರು. ಎಲ್ಲಿ ಬಂತು ಅಚ್ಚೇ ದಿನ್ ಎಂದು ಕಿಡಿಕಾರಿದರು.
ಇದೇ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, 6 ತಿಂಗಳಲ್ಲಿ 42 ಬಾರಿ ತೈಲಬೆಲೆ ಏರಿಕೆ ಮಾಡಿದ್ದಾರೆ. ಇದರಿಂದ ಜನರು ತತ್ತಿರಿಸಿದ್ದಾರೆ ಎಂದು ಕೇಂದ್ರದ ವಿರುದ್ಧ ಗುಡುಗಿದರು.
Key words: Congress –protests- over- oil –price- hike- Siddaramaiah