ನವದೆಹಲಿ,ನವೆಂಬರ್,15,2020(www.justkannada.in): ಆಕ್ಟೋಬರ್ ನಲ್ಲಿ ಕೊರೋನಾಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕ ಆಹ್ಮದ್ ಪಟೇಲ್(71) ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಕ್ಟೋಬರ್ ನಲ್ಲಿ ಅಹ್ಮದ್ ಪಟೇಲ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಆಹ್ಮದ್ ಪಟೇಲ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿರುವುದಾಗಿ ತಿಳಿದು ಬಂದಿದೆ. ಅಹ್ಮದ್ ಪಟೇಲ್ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ.
ಇನ್ನು ಈ ಕುರಿತು ಅವರ ಅಹ್ಮದ್ ಪಟೇಲ್ ಅವರ ಪುತ್ರ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ತಂದೆಯವರ ಆರೋಗ್ಯ ಸ್ಥಿತಿ ಗಂಭೀರಗೊಂಡಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುರ್ಗಾಂವ್ ನ ಮೇದಂಟಾ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಶೀಘ್ರ ಗುಣಮುಖರಾಗಲಿ ಎಂಬುದಾಗಿ ನಾವು ನೀವೆಲ್ಲಾ ಪ್ರಾರ್ಥಿಸೋಣ ಎಂದಿದ್ದಾರೆ.
Key words: congress-Senior leader -Ahmed Patel- health -serious.