ಮೈಸೂರು, ಫೆಬ್ರವರಿ 08, 2022 (www.justkannada.in): ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶವಾಗುವುದು ಖಚಿತ. ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ ಎಂದಿದ್ದಾರೆ.
ಈ ಹಿಂದೆ ಗೋ ಹತ್ಯೆ ನಿಷೇಧವನ್ನು ಉಡುಪಿಯಲ್ಲೇ ಮಾಡಿದ್ದರು. ಆಗ ಸಿದ್ದರಾಮಯ್ಯ ಸಿಎಂ ಅಧಿಕಾರ ಕಳೆದುಕೊಂಡರು. ಇದೀಗ ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂದು ಟೀಕಿಸಿದ್ದಾರೆ.
ಹಿಜಾಬ್ ಧರಿಸಿ ಅಧಿವೇಶನಕ್ಕೆ ಬರುವುದಲ್ಲ, ಮೊದಲು ಧಮ್ ಇದ್ದರೆ ಮುಸ್ಲೀಂ ಮಹಿಳೆಯರಿಗೆ ಮಸೀದಿಗೆ ಪ್ರವೇಶ ಕೊಡಿಸಿ ಎಂದು ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ.