ಬೆಂಗಳೂರು,ಜೂನ್,17,2023(www.justkannada.in): ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕುಟುಕಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಬಿಜೆಪಿಯವರುಈಗ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಮಾತಾನಾಡುತ್ತಿದ್ದಾರೆ. ಆಡಳಿತ ವ್ಯವಸ್ಥೆಯಲ್ಲಿ ಸಂವಿಧಾನವೇ ಭಗವದ್ಗೀತೆ, ಬೈಬಲ್, ಕುರಾನ್. ಸಂವಿಧಾನವೇ ಭಾರತೀಯರಿಗೆ ಗ್ರಂಥ ಇದ್ದಂತೆ ಎಂದು ನುಡಿದರು.
ಕಲಂ 25ರಲ್ಲಿ ಪ್ರತಿಯೊಬ್ಬರಿಗೂ ಧರ್ಮ ಆಯ್ಕೆಯ ಹಕ್ಕು ನೀಡಿದೆ. ಅದಕ್ಕೆ ವಿರುದ್ಧವಾಗಿ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಿದ್ದರು. ಈ ಕಾಯ್ದೆ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಅಂದೇ ಹೇಳಿದ್ದೆವು. ನಮ್ಮ ಸರ್ಕಾರಕ್ಕೆ ಸಂವಿಧಾನದ ಮೇಲೆ ನಂಬಿಕೆ ಇದೆ. ಹಾಗಾಗಿ ನಾವು ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುತ್ತಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದರು.
ಇನ್ನು ಹೆಚ್ಚುವರಿ ಅಕ್ಕಿ ಪೂರೈಕೆಗೆ ಕೇಂದ್ರ ಸರ್ಕಾರ ನಿರಾಕರಿಸಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಪರಮೇಶ್ವರ್, ಬಿಜೆಪಿಯವರನ್ನ ಕೇಳಿಕೊಂಡು ಅಧಿಕಾರ ಮಾಡಲು ಆಗೋದಿಲ್ಲ. ನಾವು ಈಗಾಗಲೇ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೇವೆ. ಅದರಂತೆ ಗ್ಯಾರಂಟಿಗಳನ್ನ ಜಾರಿಗೊಳಿಸುತ್ತೇವೆ ಎಂದರು.
Key words: Constitution – like -scripture – Indians – Home Minister -Dr. G. Parameshwar.