ಬೆಳಗಾವಿ,ಡಿಸೆಂಬರ್,28,2022(www.justkannada.in): ಅಯೋಧ್ಯೆ ಮಾದರಿಯಲ್ಲಿ ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, ರಾಮನಗರ ನಾಮಕರಣ ಆಗಿರುವುದೇ ರಾಮನ ಹೆಸರಿನಲ್ಲಿ. ರಾಮಮಂದಿರ ನಿರ್ಮಾಣಕ್ಕೆ ಸಿಎಂ ಭರವಸೆ ನೀಡಿದ್ದಾರೆ, ರಾಮನಗರದಲ್ಲಿ ಶ್ರೀರಾಮಮಂದಿರ ನಿರ್ಮಾಣ ಮಾಡುತ್ತೇವೆ ಎಂದರು.
ನಮ್ಮ ರಾಮನಗರ, ರಾಮನಗರ ಎಂದು ಪ್ರೇರಣೆ ಇದೆ. ರಾಮನ ಅಭಿವೃದ್ಧಿ ಇಲ್ಲಿಯೂ ಮಾಡಬೇಕು. ಉತ್ತರ ಭಾರತದಂತೆ ದಕ್ಷಿಣ ಭಾರತದಲ್ಲೂ ರಾಮ ಮಂದಿರ ನಿರ್ಮಾಣ ಆಗುತ್ತೆ ವಿಶ್ವಾಸ ಇದೆ. ಬರುವಂತಹ ಬಜೆಟ್ ನಲ್ಲಿ ಸಿಎಂ ಬಜೆಟ್ ಘೋಷಣೆ ಮಾಡಬಹುದು. ಈಗಾಗಲೇ ಆಗಲ್ಲ ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಅಶ್ವಥ್ ನಾರಾಯಣ್ ಹೇಳಿದರು.
ರಾಮನಗರದ ರಾಮದೇವರ ಬೆಟ್ಟವನ್ನು ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡುತ್ತೇವೆ. ದೇವಸ್ಥಾನ ಅಭಿವೃದ್ಧಿಗೆ ಯೋಜನೆ ರೂಪಿಸಲು ಮುಖ್ಯಮಂತ್ರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ. ಅಲ್ಲಿರುವ ರಾಮನ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿ, ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡುತ್ತೇವೆ ಎಂದು ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು.
Key words: Construction – Ram Mandir – Ramnagar – Minister -Ashwath Narayan.