ಬೆಂಗಳೂರು,ಜು,24,2019(www.justkannada.in): ರಾಜ್ಯ ಸಮ್ಮಿಶ್ರ ಸರ್ಕಾರ ಪತನವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹೆಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ಜತೆ ಮೈತ್ರಿ ಮುಂದುವರಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಮಾಧ್ಯಮದ ಜತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಕಾಂಗ್ರೆಸ್, ಜೆಡಿಎಸ್ ಮೈತ್ರಿ ಮುಂದುವರಿಸುವ ಬಗ್ಗೆ ನನಗೇನು ಗೊತ್ತಿಲ್ಲ. ಕಾಂಗ್ರೆಸ್ ನಾಯಕರು ಏನು ತೀರ್ಮಾನ ಕೈಗೊಳ್ಳುತ್ತಾರೆ ಎಂಬುದು ಗೊತ್ತಿಲ್ಲ ಎಂದು ತಿಳಿಸಿದರು.
ಸದ್ಯದ ರಾಜಕೀಯ ಬೆಳವಣಿಗೆ ಬಗ್ಗೆ ಮಾತ್ರ ನಾನು ಚರ್ಚಿಸಲು ಬಂದಿದ್ದೇನೆ. ಸಭೆಯಲ್ಲಿ ಜೆಡಿಎಸ್ ಅಸ್ತಿತ್ವದ ಬಗ್ಗೆ ಜೆಡಿಎಸ್ ಶಾಸಕರ ಜತೆ ಚರ್ಚಿಸುತ್ತೇವೆ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
Key words: Continuation – alliance- with –Congress- HD Kumaraswamy -reaction